ಹಳೆಯ ಒಡಂಬಡಿಕೆKNCL

ಯೋಬನು ಗ್ರಂಥ 25

1ಬಳಿಕ ಶೂಹ್ಯನಾದ ಬಿಲ್ದದನು ಹೀಗೆಂದನು:

2“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.

3ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?

4ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?

5ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.

6ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟುಮಾತ್ರದವನು?”