ಹಳೆಯ ಒಡಂಬಡಿಕೆKNCL

ಸಂಖ್ಯಾಕಾಂಡ 7

1ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

2ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.

3ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.

4ಸರ್ವೇಶ್ವರ ಸ್ವಾಮಿ ಮೋಶೆಗೆ,

5“ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು.

6ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.

7ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ

8ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು.

9ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.

10ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

11ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.

12ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.

13ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

14ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.

15ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;

16ಪಾಪಪರಿಹಾರಕ ಬಲಿಗಾಗಿ ಒಂದು ಹೋತ;

17ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀನಾದಾಬನ ಮಗ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.

18ಎರಡನೆಯ ದಿನ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗ ನೆತನೇಲನು ತಂದ ಕಾಣಿಕೆಗಳು:

19ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

20ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

21ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ

22ಪಾಪಪರಿಹಾರಕ ಬಲಿಗಾಗಿ ಒಂದು ಹೋತ;

23ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂವಾರನ ಮಗ ನೆತನೇಲನು ಕೊಟ್ಟ ಕಾಣಿಕೆಗಳು.

24ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು:

25ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

26ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

27ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದಕುರಿ,

28ಪಾಪಪರಿಹಾರಕ ಬಲಿಗಾಗಿ ಒಂದು ಹೋತ;

29ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಹೇಲೋನನ ಮಗ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು.

30ನಾಲ್ಕನೆಯ ದಿನ ರೂಬೇನ್ ಕುಲಾಧಿಪತಿ ಶೆದೇಯೂರನ ಮಗ ಎಲೀಚೂರನು ತಂದ ಕಾಣಿಕೆಗಳು:

31ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

32ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

33ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

34ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ,

35ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು, ಶೆದೇಯೂರನ ಮಗ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.

36ಐದನೆಯ ದಿನ ಸಿಮೆಯೋನ್ ಕುಲಾಧಿಪತಿ ಚೂರಿಷದ್ದೈಯನ ಮಗ ಶೆಲುಮೀಯೇಲನು ತಂದ ಕಾಣಿಕೆಗಳು:

37ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು.

38ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

39ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

40ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ;

41ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂರೀಷದ್ದೈಯನ ಮಗ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು.

42ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:

43ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

44ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

45ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

46ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

47ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ದೆಗೂವೇಲನ ಮಗ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು.

48ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:

49ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

50ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

51ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

52ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

53ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಹೂದನ ಮಗ ಎಲೀಷಾವನು ಸಮರ್ಪಿಸಿದ ಕಾಣಿಕೆಗಳು ಇವೇ.

54ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:

55ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

56ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

57ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

58ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

59ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗಮ್ಲೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.

60ಒಂಬತ್ತನೆಯ ದಿನ ಬೆನ್ಯಾಮಿನ್ ಕುಲಾಧಿಪತಿ ಗಿದ್ಯೋನಿಯ ಮಗ ಅಬೀದಾನನು ತಂದ ಕಾಣಿಕೆಗಳು:

61ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

62ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

63ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

64ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

65ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಗಿದ್ಯೋನಿಯ ಮಗ ಅಬೀದಾನನು ಸಮರ್ಪಿಸಿದ ಕಾಣಿಕೆಗಳು.

66ಹತ್ತನೆಯ ದಿನ ದಾನ್ ಕುಲಾಧಿಪತಿ ಅಮ್ಮೀಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:

67ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

68ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

69ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

70ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

71ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.

72ಹನ್ನೊಂದನೆಯ ದಿನ ಆಶೇರ್ ಕುಲಾಧಿಪತಿ ಒಕ್ರಾನನ ಮಗ ಪಗೀಯೇಲನು ತಂದ ಕಾಣಿಕೆಗಳು:

73ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

74ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

75ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

76ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

77ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಒಕ್ರಾನನ ಮಗ ಪಗೀಯೇಲನು ಸಮರ್ಪಿಸಿದ ಕಾಣಿಕೆಗಳು.

78ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು:

79ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

80ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

81ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

82ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;

83ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಏನಾನನ ಮಗ ಅಹೀರನು ಸಮರ್ಪಿಸಿದ ಕಾಣಿಕೆಗಳು.

84ಬಲಿಪೀಠವನ್ನು ಅಭಿಷೇಕಿಸಲಾದ ದಿನದಂದು ಇಸ್ರಯೇಲರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಸಮರ್ಪಿಸಿದ ಕಾಣಿಕೆಗಳು ಒಟ್ಟು: 12 ಬೆಳ್ಳಿಯ ಹರಿವಾಣಗಳು; 12 ಬೆಳ್ಳಿಯ ಬಟ್ಟಲುಗಳು; 12 ಚಿನ್ನದ ಧೂಪಾರತಿಗಳು;

85ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ.

86ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.