ಹಳೆಯ ಒಡಂಬಡಿಕೆKNCL

ಕೀರ್ತನೆಗಳು 100

1ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I

2ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II

3ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II

4ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II

5ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II