ಹಳೆಯ ಒಡಂಬಡಿಕೆKNCL
1ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ ಪ್ರಭೂ, ನಿನ್ನನೆ ಹಾಡಿಹೊಗಳುವೆನು II
2ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II
3ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II
4ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II
5ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II
6ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II
7ಮೋಸಗಾರನು ವಾಸಮಾಡನು ನನ್ನ ನಿವಾಸದಲಿ I ಸುಳ್ಳುಗಾರನು ನಿಲ್ಲಲಾರನು ನನ್ನ ಸಮ್ಮುಖದಲಿ II
8ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II