ಹಳೆಯ ಒಡಂಬಡಿಕೆKNCL

ಕೀರ್ತನೆಗಳು 128

1(ಯಾತ್ರಾಗೀತೆ) ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II

2ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II

3ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II

4ಹೊಂದುವನು ಅಂತಹ ಆಶೀರ್ವಾದವನು I ಪ್ರಭುವಿನಲಿ ಭಯಭಕ್ತಿಯುಳ್ಳವನು II

5ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

6ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II