ಹಳೆಯ ಒಡಂಬಡಿಕೆKNCL

ಕೀರ್ತನೆಗಳು 23

1ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II

2ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

3ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II

4ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II

5ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II

6ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II