ಹಳೆಯ ಒಡಂಬಡಿಕೆKNCL
1ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II
2ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II
3ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II
4ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II
5ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II
6ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II
7ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II
8ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II
9ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II
10ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II