ಹಳೆಯ ಒಡಂಬಡಿಕೆKNCL
1ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II
2ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II
3ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II
4ಪ್ರಭುವಿನ ಧ್ವನಿ ಶಕ್ತಿಯುತ I ಆತನ ಶಬ್ಧ ವೈಭವಯುತ II
5ಆತನ ಗರ್ಜನೆಗೆ ಮುರಿದುಬೀಳುವುವು ದೇವದಾರು ಮರಗಳು I ಹೌದ್ಹೌದು, ಸೀಳಿ ಹೋಳಾಗುವುವು ಲೆಬನೋನಿನ ಮಹಾ ವೃಕ್ಷಗಳು II
6ಜಿಗಿಯುವುದು ಲೆಬನೋನ್ ಪರ್ವತ ಎಳೆಗರುವಿನಂತೆ I ನೆಗೆಯುವುದು ಗಿರಿ ಸಿಯೋನ್ ಕಾಡೆಮ್ಮೆಯ ಕರುವಂತೆ II
7ಆತನ ಮಹಾ ಗರ್ಜನೆಗೆ ಥಳಥಳಿಸುವುವು ಕೋಲ್ಮಿಂಚುಗಳು I ಕಂಪಿಸುವುದು ಕಾದೇಶ ಅರಣ್ಯ, ಕದಲುವುವು ಕಾಡುಮೇಡುಗಳು II
9ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II
10ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II
11ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II