ಹಳೆಯ ಒಡಂಬಡಿಕೆKNCL
1ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II
2ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II
3ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II
4ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II
5ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II
6ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II
7ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II
8ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II
9ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II
10‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II
11ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II