ಹಳೆಯ ಒಡಂಬಡಿಕೆKNCL
1ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II
2ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II
3ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II
4ಓ ನಾಲಿಗೆಯೇ, ನೀನು ಕಪಟ I ಹಾನಿಕರ ಮಾತೇ ನಿನಗಪ್ಪಟ II
5ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II
6ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II
8ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆಮರದಂತಿರುವೆನು I ದೇವರ ಸ್ಥಿರಪ್ರೀತಿಯನು ಯುಗಾಂತರಕು ನಂಬಿಕೊಂಡಿರುವೆನು II
9ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II