ಹಳೆಯ ಒಡಂಬಡಿಕೆKNCL

ಕೀರ್ತನೆಗಳು 54

1ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II

2ನನ್ನ ಪ್ರಾರ್ಥನೆಯನು ಆಲಿಸಯ್ಯಾ I ನನ್ನ ಮಾತುಗಳಿಗೆ ಕಿವಿಗೊಡು ದೇವಾ II

3ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II

4ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II

5ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II

6ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II

7ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II