ಹಳೆಯ ಒಡಂಬಡಿಕೆKNCL
1ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II
2ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II
3ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ I ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ II
4ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು I ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು II
5ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II
6ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II
7ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II
8ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II
9ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II
10ತತ್ತರಿಸುವರು ಶತ್ರುಗಳೆಲ್ಲ ನಿರಾಶೆಯಿಂದ I ತಟ್ಟನೆ ಹಿಂಜರಿಯುವರವರೆಲ್ಲ ಅತಿ ಲಜ್ಜೆಯಿಂದ II